ಏ.ಜೆ ದಂತ ವೈದ್ಯಕೀಯ ಕಾಲೇಜಿನಿಂದ ವಿಶ್ವ ಆರೋಗ್ಯ ದಿನಾಚರಣೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಏ.ಜೆ ದಂತ ವೈದ್ಯಕೀಯ ಕಾಲೇಜಿನಿಂದ ವಿಶ್ವ ಆರೋಗ್ಯ ದಿನಾಚರಣೆ

Share This
ಮಂಗಳೂರು : ಏ.ಜೆ ದಂತ ವೈದ್ಯಕೀಯ ಕಾಲೇಜಿನ ಸಮುದಾಯ ದಂತ ಚಿಕಿತ್ಸ ವಿಭಾಗ, ಎನ್.ಯಸ್.ಯಸ್ ಯೂನಿಟ್ ಹಾಗು ಇಂಡಿಯನ್ ಡೆಂಟಲ್ ಅಸೋಸಿಯೇಷನ್ ದಕ್ಷಿಣ ಕನ್ನಡ ಬ್ರಾಂಚ್ ಇದರ ಸಹಯೋಗದೊಂದಿಗೆ ಏ.7 ರಂದು ವಿಶ್ವ ಅರೋಗ್ಯ ದಿನಾಚರಣೆ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯ ಡಿಡಿಪಿಐ, ಸುಧಾಕರ ಕೆ ಹಾಗು ಏ.ಜೆ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ನಿಲ್ಲನ್ ಶೆಟ್ಟಿ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. 

ಡಿ.ಡಿ.ಪಿ.ಐ ಸುಧಾಕರ ಕೆ. ಮಾತನಾಡಿ, ಈ ಕಾರ್ಯಕ್ರಮದ ಮೂಲಕ ಜಿಲ್ಲೆಯ ಎಲ್ಲ ಶಿಕ್ಷಕರಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡುವಲ್ಲಿ ಸರಕಾರದ ಜೊತೆ ಕೈಜೋಡಿಸಿದ ಏ.ಜೆ ದಂತ ವೈದ್ಯಕೀಯ ಕಾಲೇಜು ಹಾಗು ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಕೃತಜ್ಞತೆ ಸಲ್ಲಿಸಿದರು. ಮುಂದೆಯೂ ಇಂತಹ ಕಾರ್ಯಕ್ರಮಗಳಿಗೆ ತಮ್ಮ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಆನ್ಲೈನ್ಮೂಲಕ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಕರಿಗೆ ಕ್ಯಾನ್ಸರ್ ಹಾಗೂ ಅದರ ಪರಿಣಾಮಗಳು ಮತ್ತು ಪ್ರಾರಂಭಿಕ ಹಂತದಲ್ಲಿ ಅದನ್ನು ತಡೆಗಟ್ಟುವ ವಿಧಾನಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ವಾಜಿದ ಹಾಗು ಡಾ.ಅನುರಾಧ ಇವರುಗಳು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಇಂಡಿಯನ್ ಡೆಂಟಲ್ ಅಸೋಸಿಯೇಷನ್ ದಕ್ಷಿಣ ಕನ್ನಡ ಬ್ರಾಂಚ್ ಕಾರ್ಯದರ್ಶಿ ಡಾ. ಭರತ್ ಪ್ರಭು, ಖಜಾಂಚಿ ಡಾ.ಪ್ರಸನ್ನ ಕುಮಾರ್, ಎನ್.ಯಸ್.ಯಸ್ ಯೂನಿಟ್ ಮುಖ್ಯಸ್ಥೆ ಡಾ. ಶ್ರೇಷ್ಟ ಶೆಟ್ಟಿ ಉಪಸ್ಥಿತರಿದ್ಧರು.

ಸಮುದಾಯ ದಂತ ಚಿಕಿತ್ಸ ವಿಭಾಗದ ಮುಖ್ಯಸ್ಥೆ ಡಾ.ವಿಜಯ ಹೆಗ್ಡೆ ಸ್ವಾಗತಿಸಿದರು. ಡಾ. ಧೀಕ್ಷಾ ಈ ಕಾರ್ಯಕ್ರಮವನ್ನು ನಿರೂಪಿಸಿದರು. ಜಿಲ್ಲೆಯ ಸುಮಾರು ಸಾವಿರಕ್ಕೂ ಅಧಿಕ ಶಿಕ್ಷಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದರು.

Pages