ಬಂಟ್ಸ್ ನ್ಯೂಸ್, ಬೆಂಗಳೂರು : 2021-22 ಸಾಲಿನ ಏಕಲವ್ಯ ಪ್ರಶಸ್ತಿಗೆ ಅಪ್ರತಿಮ ಕಬಡ್ಡಿ ಆಟಗಾರ ಪ್ರಶಾಂತ್ ಕುಮಾರ್ ರೈ ಹಾಗೂ ವಾಲಿಬಾಲ್ ಆಟದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿರುವ ಅಶ್ವಲ್ ರೈ ಆಯ್ಕೆಯಾಗಿದ್ದಾರೆ.



ಇಂದು ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಡಾ. ನಾರಾಯಣ ಗೌಡ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆಯಿಂದ ನೀಡುವ 2021-22 ಸಾಲಿನ ಏಕಲವ್ಯ ಪ್ರಶಸ್ತಿ ಪುರಸ್ಕೃತ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ ಆಯ್ಕೆಯಾಗಿರುವ ಪ್ರಶಾಂತ್ ರೈ ಹಾಗೂ ಅಶ್ವಲ್ ರೈ ಅವರಿಗೆ ಅಭಿನಂದನೆಗಳು.