ಬಂಟ್ಸ್ ನ್ಯೂಸ್, ಹಾಸನ : ಸಕಲೇಶಪುರದ ಬಾಳೆಗದ್ದೆಯ ಹಾಸನ ಜಿಲ್ಲಾ ಬಂಟರ ಸಂಘದ ನೂತನ ನವೀಕೃತ ಕಟ್ಟಡದ ಉದ್ಘಾಟನೆಯು ಎ.25ರ ಸೋಮವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ.
ಸಂಘದ ನೂತನ ನವೀಕೃತ ಕಟ್ಟಡವನ್ನು ಬೆಂಗಳೂರಿನ ಎಂಜಿಆರ್ ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹಾಗೂ ಶ್ರೀಮತಿ ಆಶಾ ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಸನ ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಅಮರನಾಥ ಶೆಟ್ಟಿ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ಜಾಗತಿಕ ಬಂಟರ ಕ್ಷೇಮಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಲಿದ್ದಾರೆ.