ಏ.14 : ಬಂಟರ ಸಂಘ ಸುರತ್ಕಲ್‌'ನಲ್ಲಿ ‘ಯಕ್ಷಸಿರಿ ಯಕ್ಷಗಾನ ಕೇಂದ್ರ' ಉದ್ಘಾಟನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಏ.14 : ಬಂಟರ ಸಂಘ ಸುರತ್ಕಲ್‌'ನಲ್ಲಿ ‘ಯಕ್ಷಸಿರಿ ಯಕ್ಷಗಾನ ಕೇಂದ್ರ' ಉದ್ಘಾಟನೆ

Share This
ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಯಕ್ಷಸಿರಿ ಬಂಟರ ಸಂಘ ಸುರತ್ಕಲ್ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನಾ ಸಮಾರಂಭವು ಎಪ್ರಿಲ್ 14 ರಂದು ಗುರುವಾರ ಸಂಜೆ 4 ಗಂಟೆಗೆ ಬಂಟರ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪಂಚ ಯಕ್ಷಗಾನ ಮೇಳಗಳ ಸಂಚಾಲಕರಾದ ಪಳ್ಳಿ ಕಿಶನ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ಕದ್ರಿ ನವನೀತ ಶೆಟ್ಟಿ, ಮಾಧವ ಭಂಡಾರಿ ಕುಳಾಯಿ, ಸುರತ್ಕಲ್ ಅಗರಿ ಸಂಸ್ಥರಣಾ ವೇದಿಕೆಯ ಅಧ್ಯಕ್ಷ ಅಗರಿ ರಾಘವೆಂದ್ರ ರಾವ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸುರತ್ಕಲ್ ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪಟ್ಲ ಫೌಂಡೇಶನ್ ಟ್ರಸ್ಟ್‌ನ ಕೇಂದ್ರಿಯ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ, ಯಕ್ಷಗುರು ರಾಕೇಶ್ ರೈ ಅಡ್ಕ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸಂಚಾಲಕರು ತಿಳಿಸಿದ್ದಾರೆ.

Pages