ಥೈಲ್ಯಾಂಡ್'ನ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಶಿವಾನಿ ಶೆಟ್ಟಿ ಹೆಬ್ರಿ ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಥೈಲ್ಯಾಂಡ್'ನ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಶಿವಾನಿ ಶೆಟ್ಟಿ ಹೆಬ್ರಿ ಆಯ್ಕೆ

Share This
ಮಂಗಳೂರು: ಅಂತಾರಾಷ್ಟ್ರೀಯ ಯೂತ್ ಯೋಗಿಕ್ ಸೈನ್ಸ್ ಫೆಡರೇಷನ್ ಮತ್ತು ವರ್ಷಿಣಿ ಯೋಗ ಎಜುಕೇಷನ್ ಸಂಸ್ಥೆಗಳು, ಗವರ್ನಮೆಂಟ್ ಆಫ್ ಆಯುಷ್ ಆ್ಯಂಡ್ ಯೂತ್ ಸ್ಪೋರ್ಟ್ಸ್ ಸರ್ವಿಸಸ್ ಸಹ ಭಾಗಿತ್ವದೊಂದಿಗೆ ಆಯೋಜಿಸಿದ ರಾಷ್ಟ್ರೀಯ ಮಟ್ಟದ ಎಂಟನೇ ಯೋಗಾಸನ ಸ್ಪರ್ಧೆ ಎ.15 ರಂದು ಗೋವಾದಲ್ಲಿ ಜರುಗಿದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ 8 ರಿಂದ 10 ವರ್ಷದೊಳಗಿನ ವಯೋಮಾನ ವಿಭಾಗದಲ್ಲಿ ಭಾಗವಹಿಸಿದ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯ 5ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶಿವಾನಿ ಶೆಟ್ಟಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.
ಈಕೆ ಬೇಳಂಜೆ ಶಿವಾನಂದ ಶೆಟ್ಟಿ ಹಾಗೂ ಹೆಬ್ರಿ ಶ್ರೀಮತಿ ಸುಜಾತ ಶೆಟ್ಟಿ ದಂಪತಿಗಳ ಸುಪುತ್ರಿಯಾಗಿದ್ದು, ಯೋಗ ಗುರು ಕೆ ನರೇಂದ್ರ ಕಾಮತ್ ಕಾರ್ಕಳ ಇವರ ಶಿಷ್ಯೆಯಾಗಿರುತ್ತಾಳೆ.

ಈ ಮೊದಲು ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿಯೂ ಹಾಗೂ ಇತ್ತೀಚೆಗೆ ನಡೆದ ಮಲೇಷಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜರುಗಿದ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನಿಯಾಗಿ ಪುರಸ್ಕೃತಳಾಗಿದ್ದಾಳೆ.

ಇವಳ ಈ ಸಾಧನೆಯನ್ನು ಮೆಚ್ಚಿ ಹಲವಾರು ಸಂಘ ಸಂಸ್ಥೆಗಳು, ಹಿರಿಯ ವ್ಯಕ್ತಿಗಳು ಅಭಿನಂದಿಸಿ ಉಜ್ವಲ ಭವಿಷ್ಯವನ್ನು ಬಯಸಿರುತ್ತಾರೆ. ಅಲ್ಲದೇ ಈಕೆ ಇದೇ ಮೇ ತಿಂಗಳ ಕೊನೆಯ ವಾರದಲ್ಲಿ ಥೈಲ್ಯಾಂಡ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ 10 ವರ್ಷದೊಳಗಿನ ವಯೋಮಿತಿಯಲ್ಲಿ ಆಯ್ಕೆಯಾಗಿರುತ್ತಾಳೆ.

ಶಿವಾನಿ ಶೆಟ್ಟಿ ಹೆಬ್ರಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆರ್ಥಿಕ ನೆರವು ನೀಡುವುದಾಗಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ ಶೆಟ್ಟಿ ತಿಳಿಸಿದ್ದಾರೆ.

Pages