ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ತಾಲೂಕು ಸಮಿತಿ ಇದರ ವತಿಯಿಂದ ಮಂಗಳೂರು ತಾಲೂಕು ವಲಯ ವ್ಯಾಪ್ತಿಯಲ್ಲಿರುವ ಭಿನ್ನ ಸಾಮರ್ಥ್ಯರಿಗೆ ಸಹಾಯ ಯೋಜನೆಯ ಕಾರ್ಯಕ್ರಮ ಮೇ18 ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿ ಇರುವ ಅಮೃತೋತ್ಸವ ಕಟ್ಟಡದಲ್ಲಿರುವ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮುಂಬೈ ವಿ.ಕೆ.ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕರುಣಾಕರ ಎಮ್ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಪು-ಕಳತ್ತೂರು ಗುರ್ಮೆ ಫೌಂಡೇಶನ್ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ಪೆರ್ಮುದೆ ಬೊಳ್ಳುಳ್ಳಿಮಾರು ಗುತ್ತು ಗುರುರಾಜ ಮಾಡ, ಗಡಿ ಪ್ರಧಾನರು ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಮೂಡಬಿದ್ರೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮೇಘನಾಥ ಶೆಟ್ಟಿ, ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಬಾಳ ಜಗನ್ನಾಥ ಶೆಟ್ಟಿ, ದ.ಕ.ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಜಯಶೀಲ ಅಡ್ಯಂತಾಯ ಉಪಸ್ಥಿತರಿರಲಿದ್ದಾರೆ ಎಂದು ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ಮತ್ತು ಸಹ ಸಂಚಾಲಕ ಎನ್ ಮುರಳೀಧರ ಶೆಟ್ಟಿ ಎಡಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.