ಮೇ.29 : ಯಕ್ಷಧ್ರುವ ಪಟ್ಲ ಸಂಭ್ರಮ-2022 - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮೇ.29 : ಯಕ್ಷಧ್ರುವ ಪಟ್ಲ ಸಂಭ್ರಮ-2022

Share This
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಮೇ.29 ರಂದು ಅಡ್ಯಾರ್ ಗಾರ್ಡನ್‌ನಲ್ಲಿ ಯಕ್ಷಧ್ರವ ಪಟ್ಲ ಸಂಭ್ರಮ-2022 ನಡೆಯಲಿದೆ ಎಂದು ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ತಿಳಿಸಿದರು.
ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾತನಾಡಿ, ಶಶಿಧರ್ ಬಿ. ಶೆಟ್ಟಿ ಅವರು ಸಂಭ್ರಮದ ಅಧ್ಯಕ್ಷತೆ ವಹಿಸಲಿದ್ದು, ಡಾ. ಪುನೀತ್ ರಾಜ್‌ಕುಮಾರ್ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಪಟ್ಲ ಪ್ರಶಸ್ತಿ-2022ನ್ನು ಯಕ್ಷ ಗುರು ಮಾಂಬಾಡಿ ಸುಬ್ರಹ್ಮಣ್ಯ ಅವರಿಗೆ ಒಂದು ಲಕ್ಷ ರೂ ಗೌರವ ಧನದೊಂದಿಗೆ ಪ್ರಧಾನ ಮಾಡಲಾಗುವುದು. ಯಕ್ಷಧ್ರಮ ಕಲಾಗೌರವ-2022ನ್ನು ಪದ್ಮನಾಭ ಉಪಾಧ್ಯ, ಸದಾಶಿವ ಶೆಟ್ಟಿಗಾರ್ ಸಿದ್ದಕಟ್ಟೆ, ಆಜ್ರಿ ಗೋಪಾಲ ಗಾಣಿಗ, ಯೋಗಾಕ್ಷಿ ಗಣೇಶ್ ಗುಜರನ್, ಮಾಧವ ಭಂಡಾರಿ ಕುಳಾಯಿ, ಕಲ್ಲಗುಂಡಿ ಕೊರಗಪ್ಪ ಮಾಣಿಯಾಣಿ, ಉಜಿರೆ ನಾರಾಯಣ ಪೂಜಾರಿ, ವಿಜಯ ಕುಮಾರ್ ಶೆಟ್ಟಿ ಮೊಲೊಟ್ಟು, ಅರೆಹೊಳೆ ಸಂಜೀವ ಶೆಟ್ಟಿ, ಮಧುಕುಮಾರ್ ಬೋಳೂರು ಅವರಿಗೆ ನೀಡಲಾಗುವುದು. ಇದೇ ಸಂದರ್ಭದಲ್ಲಿ ಟ್ರಸ್ಟ್‌ನ ಸಾಧಕ ಮಹಾಪೋಷಕರಾದ ಚೆಲ್ಲಡ್ಕ ಕೆ.ಡಿ. ಶೆಟ್ಟಿ ದಂಪತಿ, ವಕ್ವಾಡಿ ಪ್ರವೀಣ್ ಶೆಟ್ಟಿ ದಂಪತಿ, ಕಡಂದಲೆ ಸುರೇಶ್ ಭಂಡಾರಿ ದಂಪತಿ, ಸವಣೂರು ಸೀತಾರಾಮ ರೈ ದಂಪತಿಗಳನ್ನು ಗೌರವಿಸಲಾಗುವುದು ಎಂದರು.

ಸಭಾ ಕಾರ್ಯಕ್ರಮದ ದಿವ್ಯ ಉಪಸ್ಥಿತಿಯನ್ನು ಶ್ರೀ ಕ್ಷೇತ್ರ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ವಹಿಸಲಿದ್ದು, ಶುಭಶಂಸನೆಯನ್ನು ಮುಂಬೈನ ಹೇರಂಬ ಕೆಮಿಕಲ್ ಇಂಡಸ್ಟ್ರೀಸ್‌ನ ನಿರ್ದೇಶಕ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಅವರು ನೀಡಲಿದ್ದಾರೆ. ಸಂಭ್ರಮಾಧ್ಯಕ್ಷತೆಯನ್ನು ಗುಜರಾತಿನ ಉದ್ಯಮಿ ಶಶಿಧರ ಬಿ. ಶೆಟ್ಟಿ ಬರೋಡಾ ಅವರು ವಹಿಸಲಿದ್ದಾರೆ. ಸಿಎ ದಿವಾಕರ್ ರಾವ್ ಪಟ್ಲ ಸಂಭ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣ ಪ್ರಸಾದ್ ಕೂಡ್ಲು ಆರೋಗ್ಯ ಶಿಬಿರದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಸಂಜೆ 6 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆರ್ಶಿವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ, ಇಂಧನ ಸಚಿವ ಸುನೀಲ್ ಕುಮಾರ್, ಮೀನುಗಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕನ್ಯಾನ‌ ಸದಾಶಿವ ಶೆಟ್ಟಿ, ಕೆ.ಡಿ. ಶೆಟ್ಟಿ ಹಾಗೂ ಯೋಗೀಂದ್ರ ಭಟ್ ಮಾತನಾಡಿ ಶುಭ ಹಾರೈಸಿದರು. ಸುರೇಶ್ ಕುಮಾರ್, ಸಂತೋಷ್ ರೈ ಬೋಳಿಯಾರ್, ರವೀಂದ್ರ ಶೆಟ್ಟಿ ಉಳಿಯೊಟ್ಟು, ವಿಜಯ್ ಕುಮಾರ್ ಕೋಡಿಯಲ್‌ಬೈಲ್, ಭುಜಬಲಿ ಧರ್ಮಸ್ಥಳ, ಟಿ.ಎನ್. ರಾಜರಾಮ್ ಭಟ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ಇದ್ದರು. ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿ, ಪುರುಷೋತ್ತಮ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ರವಿ ಶೆಟ್ಟಿ ಅಶೋಕನಗರ ವಂದಿಸಿದರು.

Pages