ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ಉದಯ ಚೌಟ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ಉದಯ ಚೌಟ ನಿಧನ

Share This
ಮಂಗಳೂರು : ಅಂತರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ಮಾಣಿ ಬದಿಗುಡ್ಡೆಯ ಉದಯ ಚೌಟ ಅವರು ಅನಾರೋಗ್ಯದಿಂದ ಮೇ.21ರ ಮುಂಜಾನೆ ನಿಧನರಾದರು.
2007ರ ಕಬಡ್ಡಿ ವಿಶ್ವಕಪ್ ಪಂದ್ಯಾಟದ ಭಾರತದ ತಂಡದಲ್ಲಿದ್ದ ಚೌಟರು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಕಬಡ್ಡಿ ವಿಶ್ವಕಪ್ ಗೆಲ್ಲುವ ಮೂಲಕ ನಮ್ಮ ದೇಶಕ್ಕೆ, ರಾಜ್ಯಕ್ಕೆ ಕೀರ್ತಿ ತಂದಿದ್ದರು. ಜತೆಗೆ ಕಬಡ್ಡಿ ಆಟದ ಉತ್ತಮ ಮಾರ್ಗದರ್ಶಕರಾಗಿ ಅನೇಕ ಉತ್ತಮ ಕಬಡ್ಡಿ ಆಟಗಾರರನ್ನು ನೀಡುವಲ್ಲಿ ಪಾತ್ರ ವಹಿಸಿದ್ದರು. 

ಬ್ಯಾಂಕ್ ಆಫ್ ಬರೋಡಾದ ಉದ್ಯೋಗಿಯಾಗಿದ್ದರು. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. 

Pages