ಮೇ.20 : ವಡ್ಡರ್ಸೆ ರಘುರಾಮ ಶೆಟ್ಟಿಯವರ ಬರೆಹಗಳ ಸಂಕಲನ 'ಬೇರೆಯೇ ಮಾತು' ಪುಸ್ತಕ ಬಿಡುಗಡೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮೇ.20 : ವಡ್ಡರ್ಸೆ ರಘುರಾಮ ಶೆಟ್ಟಿಯವರ ಬರೆಹಗಳ ಸಂಕಲನ 'ಬೇರೆಯೇ ಮಾತು' ಪುಸ್ತಕ ಬಿಡುಗಡೆ

Share This
ಮಂಗಳೂರು: ರಂಗಚಾವಡಿ ಸಾಹಿತ್ಯಿಕ - ಸಾಂಸ್ಕೃತಿಕ ಸಂಘಟನೆಯ ಆಶ್ರಯದಲ್ಲಿ ಮೇ 20 ರಂದು ಶುಕ್ರವಾರ ಬೆಳಿಗ್ಗೆ 10.30ಕ್ಕೆ ಬಲ್ಮಠ ಬಳಿಯ ಮುಂಗಾರು ಪತ್ರಿಕೆ ಸಂಪಾದಕ ವಡ್ಡರ್ಸೆ ರಘುರಾಮ ಶೆಟ್ಟಿಯವರ ಬರೆಹಗಳ ಸಂಕಲನ 'ಬೇರೆಯೇ ಮಾತು' ಪುಸ್ತಕ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.
ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾದ ಬಿ.ಕೆ. ಹರಿಪ್ರಸಾದ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬೇರೆಯೇ ಮಾತು ಪುಸ್ತಕದ ಸಂಪಾದಕರಾದ ದಿನೇಶ್ ಅಮೀನ್ ಮಟ್ಟು ಪುಸ್ತಕದ ಬಗ್ಗೆ ಮಾತನಾಡಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ವಾರ್ತಾಭಾರತಿ ಪತ್ರಿಕೆಯ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ವಹಿಸಲಿದ್ದಾರೆ. 

ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಗನ್ನಾಥ ಶೆಟ್ಟಿ ಬಾಳ ಭಾಗವಹಿಸಲಿದ್ದಾರೆ.

Pages