ಜು.31: ಕೋಸ್ಟಲ್ ಫಿಲ್ಮ್ ಅವಾರ್ಡ್ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜು.31: ಕೋಸ್ಟಲ್ ಫಿಲ್ಮ್ ಅವಾರ್ಡ್

Share This
ಮಂಗಳೂರು: ಎಸ್ ಕಂಪೆನಿ ಸಾರಥ್ಯದಲ್ಲಿ  ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ 2022 ಸಮಾರಂಭ ಜು.31ರಂದು ಮಧ್ಯಾಹ್ನ 1 ಗಂಟೆಯಿಂದ  ಮುಲ್ಕಿ ಕೊಲ್ನಾಡಿನ ಮುಲ್ಕಿ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಸಂದೇಶ್ ಬಂಗೇರ, 2018 ಮತ್ತು 2019ರಲ್ಲಿ ಬಿಡುಗಡೆಗೊಂಡ ಚಲನಚಿತ್ರವನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಜೂರಿಯವರೇ ವಿಜೇತ ಚಿತ್ರ ಹಾಗೂ ವ್ಯಕ್ತಿಗಳ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಒಟಿಟಿಯಲ್ಲಿ ಬಿಡುಗಡೆಯಾದ ಚಿತ್ರಗಳನ್ನು ಪರಿಗಣಿಸಲಾಗುವುದಿಲ್ಲ ಎಂದರು.

ಒಟ್ಟು 27 ವಿಭಾಗಗಳಲ್ಲಿ ಅವಾರ್ಡ್ ನೀಡಲಾಗುವುದು. ಈ ಹಿಂದೆ 24 ವಿಭಾಗಗಳಲ್ಲಿ ಅವಾರ್ಡ್ ನೀಡಲಾಗುತ್ತಿತ್ತು. ಈ ಬಾರಿ ಮೂರು ವಿಭಾಗವನ್ನು ಹೆಚ್ಚಿಸಲಾಗಿದೆ. ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಗೊಂಡ ಭಾ.ಮ. ರಮೇಶ್, ಇತ್ತೀಚೆಗೆ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ ಡಾ.ದೇವದಾಸ್, ಕಾಪಿಕಾಡ್ ಸೇರಿದಂತೆ ಮತ್ತಿತರ ಗಣ್ಯರನ್ನು ಇದೇ ವೇಳೆ ಸನ್ಮಾನಿಸಲಾಗುವುದು ಎಂದವರು ತಿಳಿಸಿದರು. ಯಶ್‌ರಾಜ್, ಉದಯ ಬಲ್ಲಾಳ್, ಪುನೀಕ್ ಉಪಸ್ಥಿತರಿದ್ದರು.

Pages