ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಗೌರವ ಸನ್ಮಾನ ಕಾರ್ಯಕ್ರಮ ಜೂನ್ 30 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿ ವಹಿಸಲಿದ್ದಾರೆ. ಸಮಾರಂಭದಲ್ಲಿ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಶಿಕ್ಷಣ, ಮದುವೆ, ಮನೆ ನಿರ್ಮಾಣ, ಕ್ರೀಡೆ, ವೈದ್ಯಕೀಯ ಮೊದಲಾದ ಫಲಾನುಭವಿಗಳಿಗೆ ಚೆಕ್ ಗಳನ್ನು ವಿತರಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಎ.ಜೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಎ. ಜೆ ಶೆಟ್ಟಿ, ಹುಬ್ಬಳ್ಳಿ-ಧಾರಾವಾಡ ಬಂಟರ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ (ಸುಗ್ಗಿ), ಸುರೇಶ್ ಜಿ ಶೆಟ್ಟಿ (ಎರ್ಮಾಳ್) ಮಾಜೀ ಕಾರ್ಪೋರೇಟರ್ ನ್ಯೂ ಬೋಂಬೆ ಭಾಗವಹಿಸಲಿದ್ದಾರೆ.
ಗೌರವ ಸನ್ಮಾನ : ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ದಿನಕರ ಶೆಟ್ಟಿ ಎಸಿಪಿ ಮಂಗಳೂರು ದಕ್ಷಿಣ, ದ.ಕ.ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರೀತ ಶೆಟ್ಟಿ, ವಾರ್ತಾಭಾರತಿ ಪತ್ರಿಕೆಯ ಪ್ರಧಾನ ವರದಿಗಾರ ಪುಷ್ಪರಾಜ್ ಬಿ.ಎನ್. ಎಸ್ ಡಿ ಎಂ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ ಪ್ರತಿಭಾ ರೈ, ಜೆಸಿಐ ಸುರತ್ಕಲ್ ಅಧ್ಯಕ್ಷರು ರಾಜೇಶ್ವರಿ ಡಿ ಶೆಟ್ಟಿ ಮೊದಲಾದವರನ್ನು ಗೌರವಿಸಲಾಗುವುದು.
ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ, ಜತೆ ಕಾರ್ಯದರ್ಶಿ ಸತೀಶ ಅಡಪ ಸಂಕಬೈಲ್ ಉಪಸ್ಥಿತರಿರುವರು. ಸಭೆಯಲ್ಲಿ ವಲಯ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಆಡಳಿತ ಮಂಡಳಿ ಸಭೆ: ಅಂದು ಬೆಳಿಗ್ಗೆ 10 ಗಂಟೆಗೆ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ ಜರಗಲಿದೆ.