ಸುರತ್ಕಲ್ ಬಂಟರ ಸಂಘದ ಮಹಾಸಭೆ, ಸಹಾಯಹಸ್ತ, ವಿದ್ಯಾರ್ಥಿ ವೇತನ, ಅಭಿನಂದನೆ, ಸಾಂಸ್ಕೃತಿಕ ಕಾರ್ಯಕ್ರಮ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸುರತ್ಕಲ್ ಬಂಟರ ಸಂಘದ ಮಹಾಸಭೆ, ಸಹಾಯಹಸ್ತ, ವಿದ್ಯಾರ್ಥಿ ವೇತನ, ಅಭಿನಂದನೆ, ಸಾಂಸ್ಕೃತಿಕ ಕಾರ್ಯಕ್ರಮ

Share This
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಜೂನ್ 5 ರಂದು ಭಾನುವಾರ ಸಂಜೆ 4 ಗಂಟೆಗೆ ಬಂಟರ ಭವನದಲ್ಲಿ ನಡೆಯಲಿದೆ.
ಸಮಾರಂಭವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಚೆಯರ್ ಮೆನ್ ಕರುಣಾಕರ ಎಮ್ ಶೆಟ್ಟಿ, ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ವಸಂತ ಶೆಟ್ಟಿ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಜ್ಪೆ ವಲಯ ಬಂಟರ ಸಂಘದ ಅಧ್ಯಕ್ಷ ಬಾಬು ಶೆಟ್ಟಿ ಪೆರಾರ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಶೈಕ್ಷಣಿಕ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದನೆ ನಡೆಯಲಿದೆ. ಅದೇ ರೀತಿ ನಿರಂತರ ವಿದ್ಯಾರ್ಥಿ ವೇತನ ವಿತರಣೆ, ಭಿನ್ನ ಸಾಮರ್ಥ್ಯ ಹಾಗೂ ವಿಕಲಚೇತನರಿಗೆ ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ, ಎರಡು ಮನೆಗಳ ಕೀ ಹಸ್ತಾಂತರ ನಡೆಯಲಿದೆ.

ಮಹಾಸಭೆ: ಅಂದು ಬೆಳಿಗ್ಗೆ 11 ಗಂಟೆಗೆ ಸಂಘದ 22 ನೇ ವಾರ್ಷಿಕ ಮಹಾಸಭೆ ಸಂಘದ ಸಭಾಭವನದಲ್ಲಿ ನಡೆಯಲಿದೆ. 

ಸಾಂಸ್ಕೃತಿಕ ಕಾರ್ಯಕ್ರಮ: ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗ್ರಾಮವಾರು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪಿ ಶೆಟ್ಟಿ ತಿಳಿಸಿದ್ದಾರೆ.

Pages