ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಪ್ರವಚನ ಕಾರ್ಯಕ್ರಮ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಪ್ರವಚನ ಕಾರ್ಯಕ್ರಮ

Share This
ಸುರತ್ಕಲ್ : ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಸನಾತನ ಸಂಸ್ಥೆಯ ಲಕ್ಷ್ಮೀ ಪೈ ಅವರಿಂದ ಪ್ರವಚನ ನಡೆಯಿತು.
ಕಾರ್ಯಕ್ರಮವನ್ನು ಮಹಿಳಾ ವೇದಿಕೆಯ ಕಾಟಿಪಳ್ಳ-ಕೃಷ್ಣಾಪುರ ವಲಯ ಸಂಘಟನೆಯ ಸದಸ್ಯೆ ಜಯಂತಿ ಟಿ ರೈ ಅವರು ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಬಳಿಕ ಪ್ರವಚನ ನೀಡಿದ ಸನಾತನ ಸಂಸ್ಥೆಯ ಲಕ್ಮ್ಷೀ ಪೈ ಅವರನ್ನು ಮಹಿಳಾ ವೇದಿಕೆಯಿಂದ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ ಗೌರವಿಸಿದರು.

ಇದೇ ವೇಳೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಬಬಿತಾ ಶೆಟ್ಟಿ ಅವರನ್ನು ಮಹಿಳಾ ವೇದಿಕೆಯಿಂದ ಸನ್ಮಾನಿಸಲಾಯಿತು. ಅಲ್ಲದೆ ಹಿರಿಯ ಸದಸ್ಯರಾದ ಸಮಾಜ ಸೇವಕಿ ಸುಶೀಲ ಶೆಟ್ಟಿ ಮತ್ತು ನಿವೃತ್ತ ಶಿಕ್ಷಕಿ ಪ್ರೇಮಾ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಸಮಾರಂಭದಲ್ಲಿ ಉಪಾಧ್ಯೆಕ್ಷೆ ಭವ್ಯಾ ಎ ಶೆಟ್ಟಿ, ಕಾರ್ಯದರ್ಶಿ ಸರೋಜ ಟಿ ಶೆಟ್ಟಿ, ಕೋಶಾಧಿಕಾರಿ ಶೈಲಾ ಎಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಕೇಸರಿ ಎಸ್ ಪೂಂಜ, ಕ್ರೀಡಾ ಕಾರ್ಯದರ್ಶಿ ಅಕ್ಷತಾ ಜಿ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಭಾರತಿ ಜಿ ಶೆಟ್ಟಿ, ಮಹಿಳಾ ವೇದಿಕೆಯ ಮಾಜೀ ಅಧ್ಯಕ್ಷರಾದ ಅಂಜನಾ ಶೆಟ್ಟಿ, ಚಂದ್ರಕಲಾ ಶೆಟ್ಟಿ, ಬೇಬಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Pages