ಮಂಗಳೂರು: ಯಕ್ಷಗಾನದ ಹಿರಿಯ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ (72) ಜುಲೈ 6ರಂದು ನಿಧನರಾದರು.
ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ, ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದ ಅವರು 'ಕಾಡಮಲ್ಲಿಗೆ' ಪ್ರಸಂಗದ ಮಲ್ಲಿಗೆ ಪಾತ್ರಧಾರಿಯಾಗಿ ಅಪಾರ ಜನಪ್ರಿಯತೆ ಪಡೆದಿದ್ದರು.
ದಿವಂಗತರು ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ, ಉಡುಪಿ ಕಲಾರಂಗ ಪ್ರಶಸ್ತಿ ಇತ್ಯಾದಿಗಳನ್ನು ಪಡೆದಿರುವುದಲ್ಲದೆ ಇತ್ತೀಚೆಗಷ್ಟೇ ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನೂ ಸ್ವೀಕರಿಸಿದ್ದರು.
ಯಕ್ಷಗಾನದ ಈ ಮೇರು ಕಲಾವಿದನ ನಿಧನಕ್ಕೆ ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ, ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಪುಳಿಂಚ ಪ್ರತಿಷ್ಠಾನದ ಅಧ್ಯಕ್ಷ ಶ್ರೀಧರ ಶೆಟ್ಟಿ ಪುಳಿಂಚ ಮತ್ತಿತರ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.