ಜುಲೈ 31: ಚೇಳಾರ್ ಖಂಡಿಗೆಯಲ್ಲಿ ಆಟಿದ ಪೊರ್ಲು ಕಾರ್ಯಕ್ರಮ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜುಲೈ 31: ಚೇಳಾರ್ ಖಂಡಿಗೆಯಲ್ಲಿ ಆಟಿದ ಪೊರ್ಲು ಕಾರ್ಯಕ್ರಮ

Share This
ಸುರತ್ಕಲ್: ಬಂಟರ ಸಂಘ ( ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ ಜುಲೈ 31 ಭಾನುವಾರ ಬೆಳಿಗ್ಗೆ 8.30 ರಿಂದ ಚೇಳ್ಯಾರ್ ಖಂಡಿಗೆ ಶ್ರೀ ಉಳ್ಳಾಯ ದೈವಸ್ಥಾನದ ವಠಾರದಲ್ಲಿ ಆಟಿದ ಪೊರ್ಲು ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟಕ್ಕೆ ಗಡಿ ಪ್ರಧಾನರಾದ ಆದಿತ್ಯ ಮುಕ್ಕಾಲ್ದಿ ಖಂಡಿಗೆ ಬೀಡು ಚಾಲನೆ ನೀಡಲಿದ್ದಾರೆ.
ಮಧ್ಯಾಹ್ನ 11.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಆಟಿದ ಪೊರ್ಲು ಕಾರ್ಯಕ್ರಮ‌ ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. 

ಮುಖ್ಯ ಅತಿಥಿಗಳಾಗಿ ಮುಂಬಯಿ ವಿ.ಕೆ.ಸಮೂಹ ಸಂಸ್ಥೆಗಳ ಚೆಯರ್ ಮೆನ್ ಕರುಣಾಕರ ಎಮ್ ಶೆಟ್ಟಿ ಮಧ್ಯಗುತ್ತು, ಯುವ ಉದ್ಯಮಿ ಮಿಥುನ್ ರೈ, ಸುರತ್ಕಲ್ ಬಂಟರ ಸಂಘದ ಮಾಜೀ ಅಧ್ಯಕ್ಷ ಎಮ್ ದೇವಾನಂದ ಶೆಟ್ಟಿ, ಸುರತ್ಕಲ್ ಮಾತಾ ಡೆವಲಪರ್ಸ್ ನ ಮಾಲಕ ಸಂತೋಷ್ ಕುಮಾರ್ ಶೆಟ್ಟಿ ಬಿಇ ಉಪನ್ಯಾಸಕಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಭಾಗವಹಿಸಲಿದ್ದಾರೆ. ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ ಉಪಸ್ಥಿತರಿರುವರು.

ಸನ್ಮಾನ: ಸಮಾರಂಭದಲ್ಲಿ ನಿವೃತ್ತ ಕೃಷಿ ಅಧಿಕಾರಿ ಅಬ್ದುಲ್ ಬಶೀರ್ ಸುರತ್ಕಲ್, ಕೃಷಿ ಕ್ಷೇತದಲ್ಲಿ ಸಾಧನೆಗೈದ ದಯಾನಂದ ಶೆಟ್ಟಿ ಖಂಡಿಗೆ ಬೀಡು, ಯಕ್ಷಗಾನ ಕ್ಷೇತ್ರದಲ್ಲಿ ಶಿವರಾಮ‌ ಪಣಂಬೂರು, ಶಿಕ್ಷಣ ಜಾನಪದ ಕ್ಷೇತ್ರದಲ್ಲಿ ಕೆ.ಕೆ.ಪೇಜಾವರ, ಸಮಾಜ ಸೇವೆಯಲ್ಲಿ ಗೀತಾ ಎಸ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು.

ಸಮಾರಂಭದಲ್ಲಿ ದ್ವಿತೀಯ ಪಿಯುಸಿಯಲ್ಲಿ 575ಕ್ಕೂ ಮಿಕ್ಕಿ ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಸಂಘದ ಸದಸ್ಯರಿಗೆ ಕೆಸರುಗದ್ದೆ ಕ್ರೀಡೆಯನ್ನು ಆಯೋಜಿಸಲಾಗಿದೆ. ಗದ್ದೆಯಲ್ಲಿ ಗ್ರಾಮವಾರು‌ ಜಾನಪದ ನೃತ್ಯ ಸ್ಪರ್ಧೆ, ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಹಾಗೂ ವೈಯಕ್ತಿಕ ಸ್ಪರ್ಧೆ ಹಾಗೂ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಸುರತ್ಕಲ್ ತಿಳಿಸಿದ್ದಾರೆ.

Pages