ತುಳುನಾಡ ರಕ್ಷಣಾ ವೇದಿಕೆ (ರಿ) ಮುಂಬೈ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಯಶು ಪಕ್ಕಳ ತಲಪಾಡಿ ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ತುಳುನಾಡ ರಕ್ಷಣಾ ವೇದಿಕೆ (ರಿ) ಮುಂಬೈ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಯಶು ಪಕ್ಕಳ ತಲಪಾಡಿ ಆಯ್ಕೆ

Share This
ಮಂಗಳೂರು: ಮಂಗಳೂರು ಸರಕಾರಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ಧು ತದನಂತರ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿ ಕಾರ್ಯನಿರ್ವಾಹಿಸುತ್ತಿದ್ದು ಇದರ ಜೊತೆಗೆ ಸಾಮಾಜಿಕ ಕಳಕಳಿ ಹೊಂದಿರುವ ಇವರು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದಾರೆ. ಈ ಹಿಂದೆ ಇವರು ತಲಪಾಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಗೊಂಡು ಜನಸೇವೆ ಮಾಡಿರುತ್ತಾರೆ.
ಇದೀಗ ತುಳುನಾಡ ರಕ್ಷಣಾ ವೇದಿಕೆಯ ಮುಂಬೈ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪಕ್ಕಳರವರು 2009ರಲ್ಲಿ ಯೋಗೀಶ್ ಶೆಟ್ಟಿ ಜಪ್ಪುರವರ ನೇತೃತ್ವದಲ್ಲಿ ಸ್ಥಾಪನೆ ಗೊಂಡ ತುಳುನಾಡ ರಕ್ಷಣಾ ವೇದಿಕೆ ದೇಶ ವಿದೇಶಗಳಲ್ಲಿ   ಘಟಕ ಗಳನ್ನು ಹೊಂದಿದ್ದು ಮುಂಬೈಯಲ್ಲಿ ಲಕ್ಷಾಂತರ ತುಳುವರು ತನ್ನ ಬದುಕು ಕಟ್ಟಿಕೊಳ್ಳಲು ನೆಲೆಸಿದ್ದು ತುಳುನಾಡ ರಕ್ಷಣಾ ವೇದಿಕೆ ಸಂಘಟನೆ ಬಲಪಡಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ಧಾರ್ಮಿಕ ಮಾರ್ಗದರ್ಶಕರಾದ ಶ್ರೀ ದುರ್ಗಾನಂದ ಸ್ವಾಮಿ, ಉಪಾಧ್ಯಕ್ಷರಾದ ಜೆ. ಇಬ್ರಾಹಿಂ, ಪ್ರದಾನ ಕಾರ್ಯದರ್ಶಿ ಕೆ.ವಿವೇಕಾನಂದ ರಾವ್, ಕೋಶಾಧಿಕಾರಿ ಪ್ರಶಾಂತ್ ಪೂಜಾರಿ, ಕೇಂದ್ರೀಯ ಕಚೇರಿ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ಡೊಲ್ಪಿ ಡಿಸೋಜ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Pages