ಸಂಘಟನೆಯ ಶಕ್ತಿಯಿದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ: ಶಾಸಕ ಡಾ. ಭರತ್ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸಂಘಟನೆಯ ಶಕ್ತಿಯಿದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ: ಶಾಸಕ ಡಾ. ಭರತ್ ಶೆಟ್ಟಿ

Share This
ಸುಭಾಷಿತನಗರ ರೆಸಿಡೆಂಟ್ಸ್  ವೆಲ್ಫೇರ್ ಅಸೋಸಿಯೇಷನಿನ ವಾರ್ಷಿಕೋತ್ಸವ

ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್‌ ಅಸೋಸಿಯೇಶನ್(ರಿ.) ಸುರತ್ಕಲ್ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.
ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಂಘೇ ಶಕ್ತಿ ಕಲೌಯುಗೇ ಅನ್ನೋ ಮಾತಿನಂತೆ ಕಲಿಯುಗದಲ್ಲಿ ಸಂಘಟನೆಯ ಶಕ್ತಿಯಿದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಇದನ್ನು ಅಕ್ಷರಶಃ ಪಾಲಿಸಿಕೊಂಡು ಬರುತ್ತಿರುವ ಸುಭಾಷಿತ ನಗರ ವೆಲ್ ಫೇರ್ ಅಸೋಸಿಯೇಷನ್ ಹತ್ತು ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದೆ. ಮುಂದೆ ಸುರತ್ಕಲ್, ಸೂರಜ್ ಹೋಟೆಲ್ ಸಮೀಪ 5 ಕೋಟಿ ರೂ. ಅನುದಾನದಲ್ಲಿ ಸರ್ವಿಸ್ ರಸ್ತೆ, ಸೂರಜ್ ಬಳಿ ಟ್ರಾಫಿಕ್ ಸಿಗ್ನಲ್ ಸಹಿತ ಇನ್ನಿತರ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಶಾಸಕನಾಗಿ ನಾನು ಸಂಘಟನೆಯ ಜೊತೆಗಿದ್ದು ಮುಂದೆಯೂ ನಿರಂತರ ಸಹಕಾರ ನೀಡುತ್ತೇನೆ ಎಂದರು. 

ಮುಖ್ಯ ಅತಿಥಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರತ್ನಾಕರ ಹೆಗ್ಡೆ ಮಟ್ಟಾರ್ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಜನರ ಮಧ್ಯೆ ಒಗ್ಗಟ್ಟು ಕಡಿಮೆಯಾಗಿದೆ. ಸಣ್ಣಪುಟ್ಟ ಕಾರಣಕ್ಕೂ ನೆರೆಮನೆಯವರ ಜೊತೆ ಜಗಳ ಮಾಡುತ್ತಾ ಕಾಲ ಕಳೆಯುತ್ತಾರೆ. ಅದಕ್ಕೆ ಅಪವಾದ ಎಂಬಂತೆ ಸುರತ್ಕಲ್ ಸುಭಾಷಿತ ನಗರದಲ್ಲಿ ಸ್ಥಾಪನೆಯಾಗಿರುವ ವೆಲ್ಫೇರ್ ಅಸೋಸಿಯೇಷನ್ ಸಂಘಟನೆ ಎಲ್ಲರನ್ನು ಜೊತೆಗೆ ಕರೆದುಕೊಂಡು ಸಮಾಜಕ್ಕೆ ಒಳ್ಳೆಯ ಕಾರ್ಯವನ್ನು ಮಾಡಿಕೊಂಡು ಬರುತ್ತಿದೆ. ಇದಕ್ಕಾಗಿ ಸಂಘಟನೆ ಅಭಿನಂದನಾರ್ಹವಾದುದು ಎಂದರು.

ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ ಫೇರ್‌ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಶೆಟ್ಟಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಮುಂಬಯಿ ವಿ.ಕೆ. ಸಮೂಹ ಸಂಸ್ಥೆಯ ಚೆಯರ್‌ಮ್ಯಾನ್ ಕರುಣಾಕರ ಎಂ. ಶೆಟ್ಟಿ ಮದ್ಯಗುತ್ತು, ಹಿರಿಯ ರಂಗಕರ್ಮಿ ಡಾ. ದೇವದಾಸ್ ಕಾಪಿಕಾಡ್, ನಾಗರಿಕ ಸಮಿತಿಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಹೊಸಬೆಟ್ಟು, ನಾಗರಿಕ ಸಲಹಾ ಸಮಿತಿ ಡಾ. ರಾಜ್ ಮೋಹನ್ ರಾವ್, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜ, ವಿಜಯ ಮೆಡಿಕಲ್ ಮಾಲಕ ದಯಾನಂದ ಶೆಟ್ಟಿ, ಕಾರ್ಪೋರೇಟರ್ ಗಳಾದ ನಯನಾ ಕೋಟ್ಯಾನ್, ಶ್ವೇತಾ ಪೂಜಾರಿ, ವರುಣ್ ಚೌಟ, ಮೊದಲಾದವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾಥಿಗಳನ್ನು ಗೌರವಿಸಲಾಯಿತು. ಅದೇ ರೀತಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಪ್ರಭುಕೃಷ್ಣನ್, ಅದ್ವಿಕ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಎಸೋಸಿಯೇಶನ್ ಗೌರವ ಸಲಹೆಗಾರ ಸತ್ಯಜಿತ್ ಸುರತ್ಕಲ್, ಪ್ರಶಾಂತ್ ಎಂ, ಉಪಾಧ್ಯಕ್ಷ ತಾರಾನಾಥ ಸಾಲ್ಯಾನ್, ಕೋಶಾಧಿಕಾರಿ‌ ನರಸಿಂಹ ಸುವರ್ಣ, ಕಾರ್ಯದರ್ಶಿ ಕಿಷನ್ ರಾವ್, ಜೊತೆ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

ಪುಷ್ಪರಾಜ್ ಶೆಟ್ಟಿ ಕುಡುಂಬೂರು ಸ್ವಾಗತಿಸಿದರು. ಲಕ್ಷ್ಮೀ ಚಂದ್ರಶೇಖರ ವಂದಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ‌ ನಿರ್ವಹಿಸಿದರು. ಬಳಿಕ ಚಾ ಪರ್ಕ ತಂಡದಿಂದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರ 'ನಾಯಿದ ಬೀಲ' ನಾಟಕ ಪ್ರದರ್ಶನಗೊಂಡಿತು.

Pages