ಸುರತ್ಕಲ್: ಗ್ರಾಹಕರಿಗೆ ಗುಣಮಟ್ಟದ ಪೆಟ್ರೋಲಿಯಂ ಉತ್ಪನ್ನಗಳನ್ನು ನೀಡುವ ಉದ್ದೇಶದಿಂದ ಹೆಚ್ ಪಿ ಸಿ ಎಲ್ ನ ವಿಜಯ್ ಫ್ಯೂಲ್ ಪಾರ್ಕ್ ನ್ನು ಆಗೋಸ್ಟ್ 21ರಂದು ಭಾನುವಾರ ಶುಭಾರಂಭ ಮಾಡಲಾಗುವುದು ಎಂದು ಸಂಸ್ಥೆಯ ಮಾಲಕ ದಯಾನಂದ ಡಿ ಶೆಟ್ಟಿ ಸುರತ್ಕಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸುರತ್ಕಲ್ ನಲ್ಲಿ ರಾಷ್ಟೀಯ ಹೆದ್ದಾರಿ ಬದಿಯಲ್ಲಿ ಪೆಟ್ರೋಲ್ ಪಂಪ್ ಇರದ ಕಾರಣ ವಾಹನ ಸವಾರರಿಗೆ ಸಮಸ್ಯೆ ಎದುರಾಗಿತ್ತು. ಹೀಗಾಗಿ ಇಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಪೆಟ್ರೋಲ್ ಪಂಪ್ ಪ್ರಾರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇಲ್ಲಿ ಸಿ ಎನ್ ಜಿ ಕೂಡಾ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಅವರು ಹೇಳಿದರು.
ದಿನದ 24 ಗಂಟೆಗಳ ಕಾಲ ಗ್ರಾಹಕರಿಗೆ ನಿರಂತರ ಸೇವೆ ನೀಡಲಿದ್ದು ಇದರ ಸದುಪಯೋಗ ಪಡೆಯುವಂತೆ ದಯಾನಂದ ಡಿ ಶೆಟ್ಟಿ ಹೇಳಿದರು. ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್, ಪವರ್ ಪೆಟ್ರೋಲ್, ಡೀಸೆಲ್ ಜೊತೆಗೆ ಸಿ ಎನ್ ಜಿ, ಎಲೆಕ್ಟ್ರಿಕ್ ವಾಹನ ಚಾರ್ಜ್, ವಿಶ್ರಾಂತಿ ಕೊಠಡಿ, ಶೌಚಾಲಯ ಕೂಡಾ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಆ.21ರಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಪಂಪ್ ಗೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಹೆಚ್ ಪಿ ಸಿ ಎಲ್ ಗುತ್ತಿಗೆದಾರ ಶಿವಪ್ರಸಾದ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಪುಷ್ಪರಾಜ್ ಶೆಟ್ಟಿ ಕುಡುಂಬೂರು ಉಪಸ್ಥಿತರಿದ್ದರು.