ಸುರತ್ಕಲ್ : ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್'ನ ವಾರ್ಷಿಕೋತ್ಸವ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸುರತ್ಕಲ್ : ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್'ನ ವಾರ್ಷಿಕೋತ್ಸವ

Share This
ಸುರತ್ಕಲ್: ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಆಗೋಸ್ಟ್ 28 ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
ಸಮಾರಂಭವನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ ವೈ ಭರತ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ,  
ಮುಂಬಯಿ ವಿ.ಕೆ.ಸಮೂಹ ಸಂಸ್ಥೆಗಳ ಚೆಯರ್ ಮೆನ್ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಿಭಾಗದ ವಲಯ ಆಯುಕ್ತೆ ವಾಣಿ ಆಳ್ವ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ತೆಲಿಕೆದ ಬೊಳ್ಳಿ ಡಾ. ದೇವದಾಸ ಕಾಪಿಕಾಡ್, ಮಂಗಳೂರು ನಾಗರಿಕ ಸಮಿತಿಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಹೊಸಬೆಟ್ಟು, ಸುರತ್ಕಲ್ ನಾಗರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ ರಾಜ್ ಮೋಹನ್ ರಾವ್, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ, ಸುರತ್ಕಲ್ ವಿಜಯ್ ಫ್ಯೂಲ್ ಪಾಕ್೯ನ ಮಾಲಕ ದಯಾನಂದ ಡಿ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ನಯನಾ ಕೋಟ್ಯಾನ್, ಶ್ವೇತಾ ಪೂಜಾರಿ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುವುದು. ಅದೇ ರೀತಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸ್ಥಳೀಯ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು.

ಬಳಿಕ ಚಾಪರ್ಕ ತಂಡದಿಂದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ನವರಸ ರಾಜೆ ಭೋಜರಾಜ್ ಮೊದಲಾದವರು ಅಭಿನಯಿಸಿರುವ ಈ ವರ್ಷದ ಸೂಪರ್ ಹಿಟ್ ನಾಟಕ ನಾಯಿದ ಬೀಲ ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ.
ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಲಿದ್ದಾರೆ.

Pages