ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಪೂಜೆಯು ಬಂಟರ ಭವನದಲ್ಲಿ ಜರಗಿತು.
ಸಂಜೆ ನಾಲ್ಕು ಗಂಟೆಗೆ ಭಜನೆ ಸಂಕೀರ್ತನೆ ಕಾರ್ಯಕ್ರಮದ ಬಳಿಕ ಮಹಾಪೂಜೆಯು ನೆರವೇರಿ ಅನ್ನಪ್ರಸಾದ ವಿತರಣೆ ನಡೆಯಿತು.
ಮಹಿಳಾ ವೇದಿಕೆಯ ಅಧ್ಯಕ್ಷೆ ಚಿತ್ರಾ ಜೆ. ಶೆಟ್ಟಿ, ಉಪಾಧ್ಯಕ್ಷೆ ಭವ್ಯಾ ಎ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸರೋಜ ಟಿ. ಶೆಟ್ಟಿ, ಕೋಶಾಧಿಕಾರಿ ಶೈಲಾ ಎಸ್. ಶೆಟ್ಟಿ, ಜೊತೆ ಕಾರ್ಯದರ್ಶಿ ರಾಜೇಶ್ವರಿ ಡಿ. ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಭಾರತಿ ಜಿ. ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಕೇಸರಿ ಎಸ್. ಪೂಂಜಾ, ಕ್ರೀಡಾ ಕಾರ್ಯದರ್ಶಿ ಅಕ್ಷತಾ ಜಿ. ಶೆಟ್ಟಿ, ಮಹಿಳಾ ವೇದಿಕೆಯ ಮಾಜೀ ಅಧ್ಯಕ್ಷರಾದ ಅಂಜನಾ ಶೆಟ್ಟಿ, ಚಂದ್ರಕಲಾ ಶೆಟ್ಟಿ, ಬೇಬಿ ಶೆಟ್ಟಿ, ಮಾಜೀ ಉಪಾಧ್ಯೆಕ್ಷೆ ಸುಜಾತ ಶೆಟ್ಟಿ ಹೊಸಬೆಟ್ಟು, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜ, ನಿಕಟ ಪೂರ್ವ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ ಹಾಗೂ ಪದಾಧಿಕಾರಿಗಳು, ನಿರ್ದೇಶಕರು, ಮಹಿಳಾ ಸದಸ್ಯೆಯರು ಉಪಸ್ಥಿತರಿದ್ದರು.