ಮಂಗಳೂರು: ಬಂಟ ಸಮಾಜದ ಹೆಮ್ಮೆಯ ಸುಪುತ್ರ ಸರ್ವ ಸಮಾಜದ ಏಳಿಗೆಗೆ ಮಹಾನ್ ಕೊಡುಗೆ ನೀಡಿ ಪ್ರಾತಃ ಸ್ಮರಣೀಯರು ಆಗಿರುವ ಸುಂದರ ರಾಮ್ ಶೆಟ್ಟಿ ಯವರ ನೆನಪಿನಲ್ಲಿ ಸುಂದರ್ ರಾಮ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಮತ್ತು ಮುಲ್ಕಿ ಬಂಟರ ಸಂಘ ಜಂಟಿಯಾಗಿ ನೀಡುವ ಸುಂದರರಾಮ ಶೆಟ್ಟಿ ಸ್ಮಾರಕ ಪ್ರಶಸ್ತಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.



ಈ ಸಮಾರಂಭವು ಮುಲ್ಕಿ ಬಂಟರ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಮಾತೃಭೂಮಿ ಕೋ ಆಪರೇಟಿವ್ ಸೊಸೈಟಿಯ ನಿಕಟಪೂರ್ವ ಅಧ್ಯಕ್ಷ ಮುಂಡ್ಕೂರು ರತ್ನಾಕರ ಶೆಟ್ಟಿ, ಸುಚರಿತ ಶೆಟ್ಟಿ, ಮುಲ್ಕಿ ಬಪ್ಪನಾಡು ದೇವಸ್ಥಾನದ ಮೊಕ್ತೇಸರ ಮನೋಹರ್ ಶೆಟ್ಟಿ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಗೌರವ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಕುದಿ ವಸಂತ ಶೆಟ್ಟಿ ಶುಭಾಶಂಸನೆ ಮಾಡಿದರು. ಸಾಯಿನಾಥ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.