ಸೆ.10: ಮುಂಬಯಿ ವಿವಿ ಕನ್ನಡ ವಿಭಾಗದ ವತಿಯಿಂದ ಐಕಳ ಹರೀಶ್ ಶೆಟ್ಟಿ ಅವರ ಗೌರವಗ್ರಂಥ 'ಸಾರ್ವಭೌಮ' ಲೋಕಾರ್ಪಣೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸೆ.10: ಮುಂಬಯಿ ವಿವಿ ಕನ್ನಡ ವಿಭಾಗದ ವತಿಯಿಂದ ಐಕಳ ಹರೀಶ್ ಶೆಟ್ಟಿ ಅವರ ಗೌರವಗ್ರಂಥ 'ಸಾರ್ವಭೌಮ' ಲೋಕಾರ್ಪಣೆ

Share This
ಮಂಗಳೂರು: ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗವು ಖ್ಯಾತ ಸಂಘಟಕ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರಿಗೆ 'ಸಾರ್ವಭೌಮ' ಗೌರವಗ್ರಂಥದ ಲೋಕಾರ್ಪಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 10 ರಂದು ಶನಿವಾರ ಮಧ್ಯಾಹ್ನ 2 ರಿಂದ (ವಿಶ್ವವಿದ್ಯಾಲಯದ ಕಲಿನಾ ಕ್ಯಾಂಪಸ್ಸಿನಲ್ಲಿರುವ ಕವಿವರ್ಯ ಕುಸುಮಾಗ್ರಜ ಮರಾಠಿ ಭಾಷಾ ಈ ಭವನದಲ್ಲಿ ಆಯೋಜಿಸಿದೆ.
ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಅವರು ಈ ಗೌರವಗ್ರಂಥವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಸುಬ್ರಹ್ಮಣ್ಯ ಯಡಿಪಡಿತ್ತಾಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ.ಜಿ.ಎನ್.ಉಪಾಧ್ಯ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಂಬಯಿಯ ಗಣ್ಯರ ಉಪಸ್ಥಿತಿಯಲ್ಲಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ನೆರವೇರಲಿದೆ. 

ಗೌರವಾನ್ವಿತ ಅತಿಥಿಗಳಾಗಿ ಸದಾಶಿವ ಶೆಟ್ಟಿ ಕನ್ಯಾನ (ಆಡಳಿತ ನಿರ್ದೇಶಕರು, ಹೇರಂಬ ಇಂಡಸ್ಟ್ರೀಸ್), ಆನಂದ ಶೆಟ್ಟಿ (ಆಡಳಿತ ನಿರ್ದೇಶಕರು ಆರ್ಗಾನಿಕ್ ಕೆಮಿಕಲ್ಸ್ ), ಸುಧಾಕರ ಹೆಗ್ಡೆ (ಆಡಳಿತ ನಿರ್ದೇಶಕರು, ತುಂಗಾ ಗ್ರೂಪ್ ಆಪ್ ಹೊಟೇಲ್ಸ್), ರವಿ ಎಸ್. ಶೆಟ್ಟಿ (ಆಡಳಿತ ನಿರ್ದೇಶಕರು, ಸಾಯಿ ಪ್ಯಾಲೇಸ್ ಗ್ರೂಪ್ ಆಪ್ ಹೊಟೇಲ್ಸ್) ಚಂದ್ರಹಾಸ.ಕೆ.ಶೆಟ್ಟಿ (ಅಧ್ಯಕ್ಷರು, ಬಂಟರ ಸಂಘ ಮುಂಬಯಿ), ಡಾ| ಸುನೀತಾ ಎಂ. ಶೆಟ್ಟಿ (ಹಿರಿಯ ಸಾಹಿತಿ, ಮುಂಬಯಿ), ಡಾ. ಸುರೇಶ್ ರಾವ್ (ಖ್ಯಾತ ವೈದ್ಯರು, ಸಂಜೀವಿನಿ ಆಸ್ಪತ್ರೆ, ಮುಂಬಯಿ), ಹರೀಶ್ ಜಿ .ಅಮೀನ್ (ಅಧ್ಯಕ್ಷರು, ಬಿಲ್ಲವರ ಅಸೋಸಿಯೇಶನ್, ಮುಂಬಯಿ), ಸುರೇಶ್ ಕಾಂಚನ್ (ಗೌರವ ಅಧ್ಯಕ್ಷರು, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ , ಹೋಬಳಿ, ಮುಂಬಯಿ), ರವಿ.ಎಸ್.ಶೆಟ್ಟಿ ( ಆಡಳಿತ ನಿರ್ದೇಶಕರು, ಸಾಯಿ ಪ್ಯಾಲೇಸ್ ಗ್ರೂಪ್ ಆಫ್ ಹೊಟೇಲ್ಸ್ ) ಉಮಾಕೃಷ್ಣ ಶೆಟ್ಟಿ (ಕಾರ್ಯಾಧ್ಯಕ್ಷೆ ಮಹಿಳಾ ವಿಭಾಗ, ಬಂಟರ ಸಂಘ ಮುಂಬಯಿ) ಇವರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಚಂದ್ರಶೇಖರ ಪಾಲೆತ್ತಾಡಿ ಅವರು ಪ್ರಧಾನ ಸಂಪಾದಕರಾಗಿ ಹಾಗೂ ಸಂಪಾದಕರಾಗಿ ಮುಂಬಯಿ | ವಿಶ್ವವಿದ್ಯಾಲಯ , ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ . ಪೂರ್ಣಿಮಾ ಸುಧಾಕರ ಶೆಟ್ಟಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮವೂ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Pages