ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಗೌರವ ಸನ್ಮಾನ ಕಾರ್ಯಕ್ರಮ ಅಕ್ಟೋಬರ್ 22 ರಂದು ಶನಿವಾರ ಬೆಳಿಗ್ಗೆ 10.00 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ ಸಿ.ವಿ. ನಾಯಕ್ ಹಾಲ್ ನ ಸಭಾಂಗಣದಲ್ಲಿ ಜರಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿ ವಹಿಸಲಿದ್ದಾರೆ.
ಸಮಾರಂಭದಲ್ಲಿ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಶಿಕ್ಷಣ, ಮದುವೆ, ಮನೆ ನಿರ್ಮಾಣ, ಕ್ರೀಡೆ, ವೈದ್ಯಕೀಯ ಮೊದಲಾದ ಫಲಾನುಭವಿಗಳಿಗೆ ಚೆಕ್'ಗಳನ್ನು ವಿತರಿಸಲಾಗುವುದು.
ಮುಖ್ಯ ಅತಿಥಿಗಳಾಗಿ ವಲ್ಡ್ ಬಂಟ್ಸ್ ವೆಲ್ ಫೇರ್ ಎಸೋಸಿಯೇಶನ್ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಜಾಗತಿಕ ಬಂಟ ಪ್ರತಿಷ್ಠಾನದ ಪೋಷಕ ಡಾ ಬಿ ಆರ್ ಶೆಟ್ಟಿ, ಮಾಜೀ ಅಧ್ಯಕ್ಷ ಡಾ ಎಂ.ಶಾಂತಾರಾಮ ಶೆಟ್ಟಿ, ಪ್ರತಿಷ್ಠಾನದ ಅಧ್ಯಕ್ಷ ಎ.ಜೆ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಭಾಗವಹಿಸಲಿದ್ದಾರೆ.
ಗೌರವ ಸನ್ಮಾನ: ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ ಸದಸ್ಯರಾಗಿ ಆಯ್ಕೆಯಾದ ಶ್ರೀನಾಗೇಶ್ ಹೆಗ್ಡೆ, ಶ್ರೀಧರ ಶೆಟ್ಟಿ ಕುಂಜಾಲು, ಅಶೋಕ್ ಕುಮಾರ್ ಶೆಟ್ಟಿ ಮೈರ್ ಮಾಡಿ, ಸುಧೀರ್ ಶೆಟ್ಟಿ ಕೀರ್ತಿ ಡೆವಲಪರ್ಸ್, ಸಂತೋಷ್ ಶೆಟ್ಟಿ, ಪಲ್ಲವಿ ಪಡುಬಿದ್ರಿ, ದಿನೇಶ್ ಶೆಟ್ಟಿ ಹೆರ್ಗ ಮೊದಲಾದವರನ್ನು ಗೌರವಿಸಲಾಗುವುದು.
ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ, ಜತೆ ಕಾರ್ಯದರ್ಶಿ ಪ್ರವೀಣ್ ಭೋಜಶೆಟ್ಟಿ ಉಪಸ್ಥಿತರಿರುವರು. ಸಭೆಯಲ್ಲಿ ವಲಯ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಲಿದ್ದಾರೆ.