ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಪುನರಾಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಪುನರಾಯ್ಕೆ

Share This
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾಧ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ 2022-25ರ ಸಾಲಿಗೆ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ.
ಅಜಿತ್ ಕುಮಾರ್ ರೈ ಬಂಟರ ಮಾತೃ ಸಂಘಕ್ಕೆ ಸತತವಾಗಿ ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿರುತ್ತಾರೆ.

ಮುಂದಿನ ದಿನಗಳಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಭಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈ ಗೊಳ್ಳುವುದು ಹಾಗೂ ಸಮಾಜದ ಸವೋತೊಮುಖ ಅಭಿವೃದ್ದಿಗಾಗಿ ಶ್ರಮಿಸುವುದಾಗಿ ಮಾಲಾಡಿ ಅಜಿತ್ ಕುಮಾರ್ ರೈ ನುಡಿದರು.

ಮುಖ್ಯ ಚುನಾವಣಾಧಿಕಾರಿ ವಕೀಲರಾದ ಬಿ ಗುರುಪ್ರಸಾದ್ ಶೆಟ್ಟಿ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ ವಕೀಲರಾದ ಬಿಪಿನ್ ರೈ, ಹಾಗೂ ಚುನಾವಣಾಧಿಕಾರಿ ದಿವಾಕರ ಸಾಮಾನಿ ಚೇಳಾರ್ ಗುತ್ತು ಉಪಸ್ಥಿತರಿದ್ದರು.

Pages