ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಸ್ಥಾನಕ್ಕೆ ಅಜಿತ್ ಕುಮಾರ್ ರೈ ಮಾಲಾಡಿ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ.
ಹೀಗಾಗಿ ಅಜಿತ್ ಕುಮಾರ್ ರೈ ಮಾಲಾಡಿ ಅವರು ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ನಾಲ್ಕನೇ ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.