ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ನಾಯಕತ್ವದ ಹೋರಾಟಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಸಕಾರಾತ್ಮಕ ಸ್ಪಂದನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ನಾಯಕತ್ವದ ಹೋರಾಟಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಸಕಾರಾತ್ಮಕ ಸ್ಪಂದನೆ

Share This
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಚೇರಿಗೆ ಕರೆಸಿ ಬಂಟ ಸಮುದಾಯದ ಎಲ್ಲಾ ವಿಚಾರಗಳ ಬಗ್ಗೆ ಕೂಲಂಕುಶವಾಗಿ ಮಾತುಕತೆ ನಡೆಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಮತ್ತು ಇತರ ಯೋಜನೆಗಳಿಗೆ ಸರಕಾರದ ಅನುದಾನವನ್ನು ಬಿಡುಗಡೆಗೊಳಿಸಿದರು.

ಬಂಟ ಸಮುದಾಯವನ್ನು 2A ಕೆಟಗರಿಗೆ ಸೇರಿಸುವ ಬಗ್ಗೆ ಆಶ್ವಾಸನೆಯನ್ನು ನೀಡಿ, ಬಂಟರ ಯಾನೆ ನಾಡವರ ಎಲ್ಲಾ ಆಶೋತ್ತರಗಳನ್ನು ಈಡೇರಿಸುವುದಾಗಿ ಒಕ್ಕೂಟದ ಅಧ್ಯಕ್ಷರಿಗೆ ಭರವಸೆಯನ್ನು ನೀಡುವ ಮೂಲಕ ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ.

ಮಾ.7 ರಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ತಡರಾತ್ರಿ 11 ಗಂಟೆಗೆ ಐಕಳ ಹರೀಶ್ ಶೆಟ್ಟಿ ಯವರ ಜೊತೆ ನಡೆಸಿದ ವಿಸ್ತೃತವಾದ ಮಾತುಕತೆಯ ನಡೆಸಿ ಐಕಳ ಅವರು ಬಂಟ ಸಮಾಜದ ಎಲ್ಲಾ ವಿಚಾರಗಳನ್ನು ಮನದಟ್ಟು ಮಾಡುವ ಮೂಲಕ ಬಂಟ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆಯ ಅವಶ್ಯಕತೆ ಮನಗಂಡು ಅವರು ಬಂಟ ನಾಡವರ ನಿಗಮ ಸ್ಥಾಪನೆಗೆ ತನ್ನ ಒಪ್ಪಿಗೆ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಲವನ್ನು ತುಂಬಿದ್ದಾರೆ.

ಈ ಮೂಲಕ ಇಡೀ ಬಂಟ ಸಮುದಾಯಕ್ಕೆ ಮುಂದಿನ ದಿನಗಳಲ್ಲಿ ಸಹಕಾರಿಯಾಗಲಿದೆ. ಮಾನ್ಯ ಮುಖ್ಯಮಂತ್ರಿಗಳ ಸಹಕಾರದಿಂದ ಸಮುದಾಯದ ಪರವಾಗಿ ಒಕ್ಕೂಟದ ಅಧ್ಯಕ್ಷರ ಹೋರಾಟಕ್ಕೆ ಸಂದ ಜಯವಾಗಿದೆ ಸಿಎಂ ಭೇಟಿ ಸಂದರ್ಭ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಜೊತೆಗಿದ್ದರು.

Pages