ಮಾಚ್೯ 5 : ಮುಲ್ಕಿಯಲ್ಲಿ ಬಂಟರ ಸಂಘಗಳ ಒಕ್ಕೂಟದ ಆಡಳಿತ ಕಚೇರಿ ಉದ್ಘಾಟನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮಾಚ್೯ 5 : ಮುಲ್ಕಿಯಲ್ಲಿ ಬಂಟರ ಸಂಘಗಳ ಒಕ್ಕೂಟದ ಆಡಳಿತ ಕಚೇರಿ ಉದ್ಘಾಟನೆ

Share This
ಮಂಗಳೂರು: ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಎಪ್ರಿಲ್ 5 ರಂದು ಸಂಜೆ 5 ಗಂಟೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ 'ಶ್ರೀ ಪ್ರವೀಣ್ ಭೋಜ ಶೆಟ್ಟಿ' ಆಡಳಿತ ಕಚೇರಿಯ ಉದ್ಘಾಟನೆ ನಡೆಯಲಿದೆ.
ಸಮಾರಂಭದಲ್ಲಿ ಒಡಿಯೂರು ಶ್ರೀ ಕ್ಷೇತ್ರದ ಗುರು ದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ. ಸಮಾರಂಭದಲ್ಲಿ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ, ಒಕ್ಕೂಟದ ಮಹಾ ನಿರ್ದೇಶಕರಾದ ತೋನ್ಸೆ ಆನಂದ ಶೆಟ್ಟಿ, ಶಶಿಧರ ಶೆಟ್ಟಿ ಬರೋಡಾ, ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡಸ್೯ ಮೊದಲಾದವರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಒಕ್ಕೂಟದ ಮಹಾ ನಿರ್ದೇಶಕ ಪ್ರವೀಣ್ ಭೋಜ ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಗುವುದು.

ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಬಂಟ ಪ್ರತಿಷ್ಠಾನದ ಅಧ್ಯಕ್ಷ ಎ.ಜೆ. ಶೆಟ್ಟಿ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಪೇರ್ ಟ್ರಸ್ಟ್ ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ‌ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಉಪಸ್ಥಿತರಿರುವರು.

Pages