ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ದೈವ ನರ್ತಕ ಕಾಂತು ಅಜಿಲ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ದೈವ ನರ್ತಕ ಕಾಂತು ಅಜಿಲ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ

Share This
ಮಂಗಳೂರು: ಮಾಚ್೯ 30 ರಂದು ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ನೇಮ ನಡೆಯುತ್ತಿದ್ದ ಸಂದರ್ಭದಲ್ಲಿ ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ 1 ಲಕ್ಷ ರೂ. ಆರ್ಥಿಕ ನೆರವು ಘೋಷಣೆ ಮಾಡಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ ಸಂಶೋಧನೆ ಕುರಿತು ಮಾಹಿತಿ ನೀಡುತ್ತಿದ್ದರು. 

ಎಡಮಂಗಲದ ಪ್ರಮುಖ ದೈವಸ್ಥಾನದಲ್ಲಿ ದೈವನರ್ತಕರಾಗಿ ಸೇವೆ ಮಾಡುತ್ತಿದ್ದರು. ಅವರು 45 ವರ್ಷಗಳಿಂದ ದೈವ ನರ್ತಕರಾಗಿ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ ಗ್ರಾಮದೈವಗಳ ಪರಿಚಾರಕಾಗಿ ಸೇವೆ ಸಲ್ಲಿಸುತ್ತಿದ್ದರು.

Pages