ಮೇ. 29: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮೇ. 29: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ

Share This
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮೇ.29 ರಂದು ಸೋಮವಾರ ಸಂಜೆ 3 ಗಂಟೆಗೆ ಮುಲ್ಕಿ ಬಳಿಯ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿ, ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ ಶೆಟ್ಟಿಯವರು ವಹಿಸಲಿದ್ದಾರೆ. ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿಯವರು ದೀಪ ಪ್ರಜ್ವಲನೆಗೈಯಲಿದ್ದಾರೆ. ಸಮಾಜ ಕಲ್ಯಾಣ ಕಾರ್ಯಕ್ರಮದ ಉದ್ಘಾಟನೆಯನ್ನು ಎಂಆರ್ ಜಿ ಗ್ರೂಪ್ ನ ಚೇಯರ್ ಮೆನ್ ಪ್ರಕಾಶ್ ಶೆಟ್ಟಿ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲ್ ದೀಪ್ ಕುಮಾರ್ ಆರ್ ಜೈನ್ ಭಾಗವಹಿಸಲಿದ್ದಾರೆ.

ಒಕ್ಕೂಟದ ಪೋಷಕರಾದ ಆನಂದ ಶೆಟ್ಟಿ ತೋನ್ಸೆ, ಪ್ರವೀಣ್ ಭೋಜ ಶೆಟ್ಟಿ, ಶಶಿಧರ್ ಶೆಟ್ಟಿ ಬರೋಡ, ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್, ರವಿನಾಥ್ ಶೆಟ್ಟಿ ಅಂಕಲೇಶ್ವರ್, ವಕ್ವಾಡಿ ಪ್ರವೀಣ್ ಶೆಟ್ಟಿ ದುಬೈ ಎಂ ಕರುಣಾಕರ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಅಂಕಣಕಾರ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ, ಸತೀಶ್ ಶೆಟ್ಟಿ ಉಡುಪಿ, ಡಾ ನಿರಂಜನ್ ಶೆಟ್ಟಿ ಕೆದೂರು, ದಯಾಮಣಿ ಶೆಟ್ಟಿ ಎಕ್ಕಾರ್, ನೀತಾ ರಾಜೇಶ್ ಶೆಟ್ಟಿ ಹಿರಿಯಡ್ಕ, ಅರ್ಪಿತಾ ಶೆಟ್ಟಿ ಕಟಪಾಡಿ, ಹಿರಿಯ ಪತ್ರಕರ್ತರಾದ ಆರ್ ರಾಮಕೃಷ್ಣ, ಮಹಮ್ಮದ್ ಆರೀಫ್ ಪಡುಬಿದ್ರೆ, ನಿತಿನ್ ಸಾಲ್ಯಾನ್ ಅವರನ್ನು ಗೌರವಿಸಲಾಗುವುದು. 

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ ಉಪಸ್ಥಿತರಿರುವರು.

Pages