ಜೂನ್ 4: ಸುರತ್ಕಲ್ ಬಂಟರ ಸಂಘದ ಮಹಾಸಭೆ, ಅಭಿನಂದನೆ, ಸಹಾಯಹಸ್ತ ಕಾರ್ಯಕ್ರಮ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜೂನ್ 4: ಸುರತ್ಕಲ್ ಬಂಟರ ಸಂಘದ ಮಹಾಸಭೆ, ಅಭಿನಂದನೆ, ಸಹಾಯಹಸ್ತ ಕಾರ್ಯಕ್ರಮ

Share This
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಜೂನ್ 4 ರಂದು ಭಾನುವಾರ ಬೆಳಿಗ್ಗೆ 10.30 ಕ್ಕೆ ಮಹಾಸಭೆ, ಸಂಜೆ 5 ಗಂಟೆಗೆ ಬಂಟರ ಭವನದಲ್ಲಿ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ.
ಸಮಾರಂಭವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ) ನ ಸ್ಥಾಪಕಾಧ್ಯಕ್ಷ ಎ ಸದಾನಂದ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹ ಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ, ಬಂಟರ ಸಂಘ ಮುಂಬೈ ಪೂರ್ವ ವಲಯದ ಸಮನ್ವಯಕರ ಸುಬ್ಬಯ್ಯ ಎ ಶೆಟ್ಟಿ, ಹುಬ್ಬಳ್ಳಿ ಪಂಜುರ್ಲಿ ಗ್ರೂಪ್ಸ್ ನ ಮಾಲಕ ರಾಜೇಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಶೈಕ್ಷಣಿಕ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದನೆ, ನಿರಂತರ ವಿದ್ಯಾರ್ಥಿ ವೇತನ‌ ವಿತರಣೆ, ಭಿನ್ನ ಸಾಮರ್ಥ್ಯ- ವಿಕಲಚೇತನರಿಗೆ ಸಹಾಯಹಸ್ತ, ನೂತನ ಮನೆಯ ಕೀ ಹಸ್ತಾಂತರ ನಡೆಯಲಿದೆ.

ವಾರ್ಷಿಕ ಮಹಾಸಭೆ: ಸುರತ್ಕಲ್ ಬಂಟರ ಸಂಘದ 23 ನೇ ವಾರ್ಷಿಕ ಮಹಾಸಭೆ ಅಂದು ಬೆಳಿಗ್ಗೆ 10.30 ಕ್ಕೆ ಬಂಟರ ಸಂಘದ ಸಭಾಭವನದಲ್ಲಿ ಜರಗಲಿದೆ. 

ಬೆಳಿಗ್ಗೆ 9 ಗಂಟೆಗೆ ಮಕ್ಕಳಿಂದ ಶೋ ಡ್ಯಾನ್ಸ್, ಮಧ್ಯಾಹ್ನ 12.30 ರಿಂದ ಗ್ರಾಮವಾರು ನೃತ್ಯ ಸ್ಪರ್ಧೆ ನಡೆಯಲಿದೆ. ಸಂಜೆ 5 ಕ್ಕೆ ಸಭಾ ಕಾರ್ಯಕ್ರಮ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ‌ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಸುರತ್ಕಲ್ ತಿಳಿಸಿದ್ದಾರೆ.

Pages