ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ನಾಮ ನಿರ್ದೇಶಿತ ನಿರ್ದೇಶಕರಾಗಿ ಮುಂಬೈ ಉದ್ಯಮಿ ಪಾಂಡು ಎಲ್ ಶೆಟ್ಟಿ ಮುಂಚೂರು ಇವರನ್ನು ಸುರತ್ಕಲ್ ಬಂಟರ ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಅವಿರೋಧವಾಗಿ ನೇಮಕ ಮಾಡಲಾಯಿತು.


ಹೊರನಾಡು ಕ್ಷೇತ್ರ ವಿಭಾಗದಲ್ಲಿ ಹೊಟೇಲ್ ಉದ್ಯಮಿ, ಸಮಾಜ ಸೇವಕ ಪಾಂಡು ಎಲ್ ಶೆಟ್ಟಿ ಮುಂಚೂರು ಅವರನ್ನು ನೇಮಕ ಮಾಡಲಾಗಿದೆ.
ಸಭೆಯಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಸುಧಾಕರ ಎಸ್ ಪೂಂಜ, ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.