ಆಗೋಸ್ಟ್ 13: ಸುರತ್ಕಲ್ ಬಂಟರ ಸಂಘದಿಂದ ಆಟಿದ ಪೊರ್ಲು, ಅಭಿನಂದನಾ ಕಾರ್ಯಕ್ರಮ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಆಗೋಸ್ಟ್ 13: ಸುರತ್ಕಲ್ ಬಂಟರ ಸಂಘದಿಂದ ಆಟಿದ ಪೊರ್ಲು, ಅಭಿನಂದನಾ ಕಾರ್ಯಕ್ರಮ

Share This
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಇದರ ಸಹಯೋಗದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಆಗೋಸ್ಟ್ 13ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಸಂಘದ ಮಾಜೀ ಅಧ್ಯಕ್ಷ ಎಂ ದೇವಾನಂದ ಶೆಟ್ಟಿ ಕಾರ್ಯಕ್ರಮ‌ ಉದ್ಘಾಟಿಸಲಿದ್ದಾರೆ.

ಮಂಗಳೂರು ಸಂಧ್ಯಾ ಕಾಲೇಜು ವಿಶ್ವವಿದ್ಯಾನಿಲಯ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಉಪನ್ಯಾಸಕಿ ಜಯಲಕ್ಷ್ಮೀ ಆರ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಕುವೆಂಪು ವಿಶ್ವ ವಿದ್ಯಾನಿಲಯದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ ಸದಾನಂದ ಶೆಟ್ಟಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ ವೈ ಭರತ್ ಶೆಟ್ಟಿ, ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಎ ಕೋಟ್ಯಾನ್, ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಮಹಿಳಾ ವೇದಿಕೆಯ ಅಧ್ಯೆಕ್ಷೆ ಭವ್ಯಾ ಎ ಶೆಟ್ಟಿ ಉಪಸ್ಥಿತರಿರುವರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಗುತ್ತದೆ. ಭಾಷಾ ಸಂಶೋಧನಾ ಕ್ಷೇತ್ರ: ಡಾ. ಸಾಯಿಗೀತಾ ಹೆಗ್ಡೆ, ಕಲೆ-ರಂಗಭೂಮಿ ಕ್ಷೇತ್ರ: ಪರಮಾನಂರ ಸಾಲ್ಯಾನ್ ಸಸಿಹಿತ್ಲು, ಸಂಗೀತ ಕ್ಷೇತ್ರ: ಸತೀಶ್ ಸುರತ್ಕಲ್, ಸಮಾಜ ಸೇವೆ: ಅಬ್ದುಲ್ ಅಜೀಜ್ ಸುರತ್ಕಲ್, ಕೃಷಿ ಕ್ಷೇತ್ರ: ವೆಂಕಟೇಶ್ ಶೆಟ್ಟಿ ಚೇಳಾರ್ ಇವರನ್ನು ಸನ್ಮಾನಿಸಲಾಗುವುದು.

ಸಮಾರಂಭದಲ್ಲಿ ಸಂಘದ ಮಹಿಳೆಯರಿಂದ ಗ್ರಾಮವಾರು ಜಾನಪದ ನೃತ್ಯ, ರೂಪಕ, ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ. ಪುರುಷರಿಗೆ ಚೆನ್ನೆಮಣೆ ಆಟ, ತೆಂಗಿನಕಾಯಿ ಕುಟ್ಟುವುದು, ಮುಂಡಾಸು ಕಟ್ಟುವುದು, ಮಹಿಳೆಯರಿಗೆ ಚೆನ್ನೆಮಣೆ, ಹಿಡಿಸೂಡಿ ತಯಾರಿಸುವುದು, ಮಡಲು ಹೆಣೆಯುವ ಸ್ಪರ್ಧೆ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ತಿಳಿಸಿದ್ದಾರೆ.

Pages