ಭಾರತೀಯ ಸೇನೆ ಸಶಕ್ತವಾಗಿದೆ: ಮೇಜರ್ ಜನರಲ್ ಸತೀಶ್ ಭಂಡಾರಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಭಾರತೀಯ ಸೇನೆ ಸಶಕ್ತವಾಗಿದೆ: ಮೇಜರ್ ಜನರಲ್ ಸತೀಶ್ ಭಂಡಾರಿ

Share This
ಮಂಗಳೂರು: ಭಾರತೀಯ ಸೇನೆ ಇಂದು ಸಶಕ್ತವಾಗಿದ್ದು ಯಾವುದೇ ಶತ್ರುರಾಷ್ಟ್ರವನ್ನು ಬಗ್ಗು ಬಡಿಯಲು ಸಮರ್ಥವಾಗಿದೆ. ಸೇನಾ ಸಾಧನಗಳ ತಯಾರಿಯ ಸಂಶೋಧನೆ, ಅಭಿವೃದ್ಧಿ ಹಾಗೂ ಉತ್ಪಾದನೆಯಲ್ಲಿ ದೇಶ ಶೇ.75ರಷ್ಟು ಸ್ವಾವಲಂಬಿಯಾಗಿದೆ ಎಂದು ಮೇಜರ್ ಜನರಲ್ ಸತೀಶ್ ಭಂಡಾರಿ ಹೇಳಿದರು.
ನಗರದ ಹೋಟೆಲ್ ಮೋತಿ ಮಹಲ್ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 28ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 'ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್' ಸ್ವೀಕರಿಸಿ ಮಾತನಾಡಿದ ಅವರು, ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಸಹಜವಾಗಿಯೇ ಕಠಿಣ ಸವಾಲುಗಳನ್ನು ಎದುರಿಸಬೇಕಾಗುತ್ತಿದೆ. ಆದರೆ ದೇಶಕ್ಕಾಗಿ ಸೇವೆ ಸಲ್ಲಿಸಿದ ಅನುಭವ ಸದಾ ಸ್ಮರಣೀಯ ಎಂದರು.

ಸಮಾರಂಭದಲ್ಲಿ ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಉದ್ಯಮಿ ಎಂ.ಆರ್.ಜಿ.ಗ್ರೂಪಿನ ಡಾ.ಕೆ.ಪ್ರಕಾಶ್ ಶೆಟ್ಟಿ ಅವರಿಗೆ, ಕೃಷಿ ಕ್ಷೇತ್ರದ ಸಾಧನೆಗಾಗಿ ಪುಷ್ಪ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಮನೀಶ್ ಶೆಟ್ಟಿ ಅವರಿಗೆ ಸಿಎ ವೈ.ಆರ್. ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ರೋಶನ್ ಶೆಟ್ಟಿ ಅವರಿಗೆ ಸಿಎ ಗೋಪಾಲ್.ಬಿ. ಶೆಟ್ಟಿ ದತ್ತಿನಿಧಿ ಪ್ರಶಸ್ತಿಗಳನ್ನು ವಿತರಿಸಲಾಯಿತು. ಯಕ್ಷಗಾನ ರಂಗದಲ್ಲಿ 58 ವರ್ಷ ಸೇವೆ ಸಲ್ಲಿಸಿದ ಹಳ್ಳಾಡಿ ಜಯರಾಮ ಶೆಟ್ಟಿ ಅವರಿಗೆ ದಿ| ಡಿ.ಕೆ. ಚೌಟ ದತ್ತಿನಿಧಿಯಿಂದ ರೂ.25 ಸಾವಿರ ನಗದು, ಫಲಕ ನೀಡಿ ಗೌರವಿಸಲಾಯಿತು. ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಟ್ರಸ್ಟ್ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಉಪಾಧ್ಯಕ್ಷರಾದ ಕುಶಲ್.ಎಸ್. ಹೆಗ್ಡೆ, ಕೆ.ಎಸ್. ಹೆಗ್ಡೆ, ಯೋಜನಾ ನಿರ್ದೇಶಕ ಡಾ.ಬಿ. ಸಂಜೀವ ರೈ, ಖಜಾಂಚಿ ಸಿಎ ಸುದೇಶ್ ಕುಮಾರ್ ರೈ, ಪ್ರೊ.ಜಿ.ಆರ್.ರೈ, ಪಳ್ಳಿ ಕಿಶನ್ ಹೆಗ್ಡೆ ಉಪಸ್ಥಿತರಿದ್ದರು. ಜ್ಯೋತಿ ಪ್ರಸಾದ್ ಹೆಗ್ಡೆ, ಜೈರಾಜ್.ಬಿ.ರೈ ಮತ್ತು ಆರ್ತಿ ಶೆಟ್ಟಿ ಸನ್ಮಾನಿತರನ್ನು ಪರಿಚಯಿಸಿದರು. ಕಳ್ಳಿಗೆ ತಾರನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕೆ.ಎಂ.ಶೆಟ್ಟಿ ವಂದಿಸಿದರು.

Pages